ಶೀಘ್ರ ಗಾಂಧಿ ಭವನ ಲೋಕಾರ್ಪಣೆಗೆ ಕ್ರಮ: ಜಿಲ್ಲಾಧಿಕಾರಿ2016-17ನೇ ಸಾಲಿನ ಆಯವ್ಯಯದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ, ತತ್ವ, ಸಂದೇಶ ಮತ್ತು ಗಾಂಧಿ ವಿಚಾರಧಾರೆಗಳನ್ನು ಹೆಚ್ಚು ಪ್ರಚಾರ ಕೈಗೊಳ್ಳಲು ಪ್ರತಿ ಜಿಲ್ಲೆಯಲ್ಲಿ ತಲಾ ₹ 3 ಕೋಟಿ ವೆಚ್ಚದಲ್ಲಿ ಗಾಂಧಿ ಭವನ ನಿರ್ಮಿಸಲು 2018ರಲ್ಲಿ ಅನುದಾನ ಬಿಡುಗಡೆ ಮಾಡಿತ್ತು. ಅದರಂತೆ ಅಂದಿನ ಜಿಲ್ಲಾಧಿಕಾರಿ ಗುಲಗಂಜಿಕೊಪ್ಪದ ಸರ್ವೆ ನಂ. 80, ಹೊಸ ಬಸ್ ನಿಲ್ದಾಣದ ಎದುರಿಗೆ ಇರುವ ಜಾಗದಲ್ಲಿ 29 ಗುಂಟೆ ಜಮೀನನ್ನು ನೀಡಿದ್ದರು.