ವಕ್ಫ್ ವಿಚಾರದಲ್ಲಿ ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ: ಸಿಎಂ ಸಿದ್ದರಾಮಯ್ಯವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್ ನೀಡಲಾಗಿದೆ. ಬಿಜೆಪಿಯ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್ ಕೊಟ್ಟಿದ್ದರು. ಬಿ.ಎಸ್. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ ಶೆಟ್ಟರ್, ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದ ವೇಳೆಯೂ ನೋಟಿಸ್ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.