ನವೆಂಬರ್‌ಗೆ ಸೀಮಿತವಾಗದಿರಲಿ ಕನ್ನಡದ ಪ್ರೀತಿಕರ್ನಾಟಕ ಏಕೀಕರಣ ಚಳವಳಿ ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಆಲೂರ ವೆಂಕಟರಾಯರು ಇದರ ಮೂಲ ಪುರುಷರು. ಏಕೀಕರಣ ಚಳವಳಿಯ ಪ್ರಮುಖರಾದ ರಾ.ಹ. ದೇಶಪಾಂಡೆ, ಡೆ. ಚನ್ನಬಸಪ್ಪರವರು, ಅದರಗುಂಚಿ ಶಂಕರಗೌಡ ಪಾಟೀಲರು ಹಾಗೂ ಕನ್ನಡ ಭಾಷಾ ಬೆಳವಣಿಗೆಗೆ ಕೊಡುಗೆ ನೀಡಿದ ನಾಡಿನ ಹೆಸರಾಂತ ಕವಿ, ಸಾಹಿತಿ, ಸಂಗೀತಗಾರರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ.