ಹುಬ್ಬಳ್ಳಿ ಫ್ಲೈ ಓವರ್ ಕಾಮಗಾರಿ ವೇಗ ನೀಡಲು ಗಡ್ಕರಿ ಸೂಚನೆನವದೆಹಲಿಯ ತಮ್ಮ ಕಚೇರಿಯಿಂದಲೇ ಧಾರವಾಡ ಸಂಸದರು ಮತ್ತು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಸಮ್ಮುಖದಲ್ಲಿಯೇ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವ ಗಡ್ಕರಿ, ಫ್ಲೈಓವರ್ ಕಾಮಗಾರಿ ಪ್ರಗತಿಯ ಸಂಪೂರ್ಣ ಮಾಹಿತಿ ಪಡೆದು ತ್ವರಿತ ವೇಗ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.