ನಾನು ಮುಖ್ಯಮಂತ್ರಿಯಾದರೆ ತಪ್ಪೇನು?: ತಿಮ್ಮಾಪುರಗೃಹ ಸಚಿವ ಡಾ. ಜಿ. ಪರಮೇಶ್ವರ ನಿವಾಸದಲ್ಲಿ ನಡೆಯಬೇಕಾಗಿದ್ದ ದಲಿತರ ಸಭೆಯನ್ನು ರದ್ದುಗೊಳಿಸಿಲ್ಲ, ಕಾರಣಾಂತರಗಳಿಂದ ಮುಂದೂಡಲಾಗಿದೆ. ದಲಿತ ಶಾಸಕರು ಹಾಗೂ ಸಚಿವರು ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ವಿಚಾರ ಹಾಗೂ ಸಮಸ್ಯೆ ಹೇಳಿಕೊಳ್ಳುವ ಉದ್ದೇಶದಿಂದ ಈ ಸಭೆ ಕರೆಯಲಾಗಿತ್ತು ಎಂದು ಅಬಕಾರ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.