ಖಾಸಗಿ ತೆಕ್ಕೆಗೆ ಪಾಲಿಕೆಯ ಈಜುಗೊಳ?ಹು-ಧಾ ಮಹಾನಗರ ಪಾಲಿಕೆಯ ಈಜುಗೊಳದ ನಿರ್ವಹಣೆ ವೆಚ್ಚ ಹೆಚ್ಚಳ, ಸ್ವಚ್ಛತೆ, ನೀರಿನ ಗುಣಮಟ್ಟ ಕಾಪಾಡುವುದು, ಕೆಲಸ ನಿರ್ವಹಿಸುತ್ತಿರುವ 12 ಸಿಬ್ಬಂದಿಗೆ ಸಂಬಳ ನೀಡುವುದು, ಇತರ ಮೂಲಸೌಕರ್ಯ ಒದಗಿಸುವುದು ಹೆಚ್ಚು ಖರ್ಚುದಾಯಕವಾಗಿದೆ. ಇದನ್ನು ಸರಿದೂಗಿಸಲು ಪಾಲಿಕೆಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.