ಶಾಲೆಯಲ್ಲಿ ಮೀಟರ್ ಬಡ್ಡಿ ಸಾಲ ದಂಧೆ: ಅಪ್ರಾಪ್ತನೊಬ್ಬ ಇನ್ನೊಬ್ಬ ಅಪ್ರಾಪ್ತನಿಗೆ ಚಾಕುವಿನಿಂದ ಇರಿದು ಹಲ್ಲೆಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ವ್ಯವಹಾರ ಶಾಲಾ ಮಕ್ಕಳನ್ನು ತಲುಪಿದ್ದು, 10 ನೇ ತರಗತಿಯ ವಿದ್ಯಾರ್ಥಿಯೊಬ್ಬ 9 ನೇ ತರಗತಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.