ಮೈಸೂರಲ್ಲಿ ಆಗಿದ್ದು ಇಲ್ಲೇಕೆ ಆಗುತ್ತಿಲ್ಲ?ಮೈಸೂರಿನಲ್ಲಿ ಪ್ರತಿ ವರ್ಷ ದಸರಾ ನಡೆಯುವುದರಿಂದ ಕೋಟ್ಯಂತರ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಅಲ್ಲಿ ಹೆಚ್ಚಿನ ಪೌರ ಕಾರ್ಮಿಕರ ಅವಶ್ಯಕತೆ ಇದೆ ಎಂದು ಅಲ್ಲಿನ ಮಹಾನಗರ ಪಾಲಿಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆದಿದೆ. ಆದರೆ, ಹುಬ್ಬಳ್ಳಿ-ಧಾರವಾರ ಮಹಾನಗರ ಪಾಲಿಕೆಯಲ್ಲಿ ನಿಗದಿಗಿಂತ ಹೆಚ್ಚುವರಿ ಪೌರಕಾರ್ಮಿಕರು ಇರುವುದರಿಂದ ನೇರನೇಮಕಾತಿ ಸಾಧ್ಯವಿಲ್ಲ ಎಂದು ಪಾಲಿಕೆ ಆಯುಕ್ತರು ಹೇಳುತ್ತಿದ್ದಾರೆ.