ಧಾರವಾಡದಲ್ಲಾಗಲಿ ಪಂ. ಪಂಚಾಕ್ಷರಿ ಗವಾಯಿಗಳ ಸ್ಮಾರಕಉತ್ತರದ ಸಂಗೀತವನ್ನು ದಕ್ಷಿಣಕ್ಕೆ ತಂದ ಪ್ರಮುಖರಲ್ಲೊಬ್ಬರಾದ, ಶಿಷ್ಯ ಪರಂಪರೆಯ ಮೂಲಕ ಧಾರವಾಡಕ್ಕೆ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ತವರು ಎನ್ನುವ ಖ್ಯಾತಿ ತಂದು ಕೊಟ್ಟ, ವಚನಗಳಿಗೆ ರಾಗ ಸಂಯೋಜಿಸಿ ಹಾಡಿ, ವಚನ ಗಾಯನ ಪರಂಪರೆಗೆ ನಾಂದಿ ಹಾಡಿದ್ದಲ್ಲದೇ ಭಾರತ ರತ್ನ ಪಂ. ಭೀಮಸೇನ ಜೋಶಿ ಅವರಂತಹ ಮಹಾನ್ ಸಂಗೀತ ದಿಗ್ಗಜರನ್ನು ಕೊಡುಗೆಯಾಗಿ ನೀಡಿದ ಶ್ರೇಯಸ್ಸು ಗವಾಯಿಗಳಿಗೆ ಸಲ್ಲುತ್ತದೆ.