ಬೀಗರ ಊರಲ್ಲಿ ಗೆದ್ದು ಬೀಗಿದ ಶೆಟ್ಟರ್1990 ರಿಂದ ಸಕ್ರಿಯ ರಾಜಕಾರಣದಲ್ಲಿರುವ ಶೆಟ್ಟರ್, ಒಂದು ಹಂತದಲ್ಲಿ ಅದೃಷ್ಟದ ರಾಜಕಾರಣಿ ಎಂದೇ ಹೆಸರು ಪಡೆದವರು. ಸರಳ, ಸಜ್ಜನಿಕೆಗೆ ಹೆಸರಾದವರು. ಕುಟುಂಬದಲ್ಲೇ ಜನಸಂಘದ ರಕ್ತ ಹೊಂದಿರುವ ಶೆಟ್ಟರ್, ಉತ್ತರ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸುವಲ್ಲಿ ಪ್ರಮುಖರಲ್ಲಿ ಒಬ್ಬರು.