ಕಿಮ್ಸ್‌ಗೆ ಕೆಎಂಸಿ-ಆರ್‌ಐ ಎಂದು ನಾಮಕರಣ ಮಾಡಲು ಸಿದ್ಧತೆನಗರದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿ-ಆರ್‌ಐ) ಆಗಿ ಹೆಸರು ಬದಲಿಸಿಕೊಳ್ಳಲಿದೆ. ಈಗಾಗಲೇ ಇದಕ್ಕೆ ಸರ್ಕಾರದಿಂದ ಒಪ್ಪಿಗೆಯೂ ದೊರೆತಿದ್ದು, ಒಂದೆರಡು ತಿಂಗಳಲ್ಲಿ ಹೆಸರು ಬದಲಿಸಿಕೊಳ್ಳುವ ಪ್ರಕ್ರಿಯೆ ನಡೆಯಲಿದೆ.