ರಾಜೀನಾಮೆ ನಿರ್ಧಾರದಿಂದ ಹೊರಟ್ಟಿ ಹಿಂದಕ್ಕೆ: ಸಭಾಪತಿ ಬಸವರಾಜ ಹೊರಟ್ಟಿಸದನದಲ್ಲಿ ಸದಸ್ಯರ ವರ್ತನೆಯಿಂದ ಬೇಸರಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿತೈಷಿಗಳು, ಅಭಿಮಾನಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.