ಹುಬ್ಬಳ್ಳಿ ಎಪಿಎಂಸಿಯಲ್ಲಿ ನೈಟ್‌ಲೈಫ್ ಫುಲ್ ಬ್ಯುಸಿ..!ಹುಬ್ಬಳ್ಳಿಯ ನೈಟ್ ಲೈಫ್ ಹೇಗಿರುತ್ತದೆ ಎಂಬುದನ್ನು ಅರಿಯಬೇಕೆಂದರೆ ಎಪಿಎಂಸಿಗೆ ಬರಬೇಕು. ಮಧ್ಯರಾತ್ರಿ 12 ಗಂಟೆ ಆದರೆ ಸಾಕು ಸಾಲುಗಟ್ಟಿ ನಿಂತ ತರಕಾರಿ ಹೊತ್ತಿರುವ ವಾಹನಗಳು, ಅಂಗಡಿಗಳ ಮುಂದೆ ಎಲ್ಲೆಂದರಲ್ಲೇ ರೈತರು, ಅವರೊಂದಿಗೆ ಬಂದಿರುವವರು ಮಲಗಿರುವ ದೃಶ್ಯ. ಇಲ್ಲವೇ ವಾಹನಗಳಲ್ಲೇ ತೂಕಡಿಸುತ್ತಾ ನಿದ್ದೆಗೆ ಜಾರಿರುವ ಡ್ರೈವರ್‌ಗಳು. ಅವರನ್ನು ಎಚ್ಚರಿಸಿ ತಮ್ಮ ಚಹಾ ಮಾರಾಟ ಮಾಡಲು ಹವಣಿಸುತ್ತಿರುವ ಚಾಯ್‌ವಾಲಾಗಳು. ಇದೇ ಇಲ್ಲಿನ ನೈಟ್‌ಲೈಫ್ ಎಂಬಂತಾಗಿದೆ.