ಸಿರಿಧಾನ್ಯ ಬೆಳೆಯುವ ರೈತರಿಗೆ ರೈತಸಿರಿ ಯೋಜನೆ ಮೂಲಕ ಪ್ರೋತ್ಸಾಹಸಿರಿಧಾನ್ಯಗಳು ಪ್ರಸ್ತುತ ಸನ್ನಿವೇಶದಲ್ಲಿ ಪ್ರಮುಖ ಆಹಾರ ಬೆಳೆಗಳಾಗುತ್ತಿವೆ. ಅತೀ ಕಡಿಮೆ ಮಳೆ ಇರುವ ಪ್ರದೇಶಗಳಲ್ಲಿ, ಶುಷ್ಕ, ಒಣ ಪರಿಸ್ಥಿತಿಗಳಲ್ಲಿ, ಕಡಿಮೆ ಫಲವತ್ತತೆ ಇರುವ ಮಣ್ಣಿನಲ್ಲಿ ಸಹ ಬೆಳೆಯಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಎಂ. ಹೇಳಿದರು.