ಎಸ್ಸಿ-ಎಸ್ಟಿ ಅನುದಾನ ನೂರರಷ್ಟು ಬಳಸಲು ಡಿಸಿ ಸೂಚನೆವಾರ್ತೆ ಧಾರವಾಡ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ ನಿಗದಿಪಡಿಸಿರುವ ಅನುದಾನವನ್ನು ಅನುಮೋದಿತ ಕ್ರಿಯಾಯೋಜನೆ ಅನುಸಾರ ಬಳಕೆ ಮಾಡಿ ನೂರರಷ್ಟು ಪ್ರಗತಿ ಸಾಧಿಸಿ, ಅಧಿಕಾರಿಗಳು ವರದಿ ನೀಡಬೇಕು ಎಂದು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.