ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರನ್ನು ಗೌರವಿಸಿಕನ್ನಡಪ್ರಭ ವಾರ್ತೆ ಧಾರವಾಡವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರನ್ನು ಗೌರವಿಸಿದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕ ಏರ್ಪಡಿಸಿದ ಶಿಕ್ಷಣ ಪುನಶ್ಚೇತನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ-ಶಿಕ್ಷಣ ಸಂಸ್ಕೃತಿಯ ಸಾಕಾರ ರೂಪವಾಗಿದ್ದು,ಇಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸಬೇಕು.ಶಿಕ್ಷಕರು ಸಹನಶೀಲರು, ಸಾಧಕರು. ಧಾರ್ಮಿಕ ಧರ್ಮ ಗುರುಗಳು ಸಹ ಸಮಾಜ ಸುಧಾರಣೆಯ ಶಿಕ್ಷಕರು.ಶಿಕ್ಷಕರು ಪವಾಡ,ನಂಬಿಕೆ, ಮೌಢ್ಯಗಳಿಂದ ಹೊರ ಬಂದು ಉತ್ತಮ ಸಮಾಜದ ನಿರ್ಮಾಣ ಮಾಡಬೇಕು ಎಂದರು.