ಪಂಚರಾಜ್ಯಗಳ ಫಲಿತಾಂಶ ಲೋಕಸಭಾ ಚುನಾವಣೆಗೆ ಮುನ್ನುಡಿ: ಟೆಂಗಿನಕಾಯಿಪಂಚರಾಜ್ಯಗಳ ಚುನಾವಣಾ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿಯಾಗಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮತ್ತೊಮ್ಮೆ ಒಪ್ಪಿಕೊಂಡಿದ್ದು, ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಗೆಲುವಿನ ನಾಗಾಲೋಟ ಮುಂದುವರಿಸಿದೆ.