ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿಕ್ಷಕರದೇ ಚಕ್ಕರ್!ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕ್ಲಾಸಿಗೆ ಚಕ್ಕರ್ ಹೊಡೆದರೆ, ಇಲ್ಲಿ ಮಾತ್ರ ಶಿಕ್ಷಕರೇ ಚಕ್ಕರ್ ಹೊಡಿತಾರೆ. ಮಕ್ಕಳಿಗೆ ಪಾಠ ಪ್ರವಚನವನ್ನೇ ನಡೆಸಲ್ಲ. ಈ ಬಗ್ಗೆ ವಿಚಾರಣೆ ನಡೆಸಿ..!ಇದು ನಗರದ ಹೊರವಲಯದ ತಾರಿಹಾಳದಲ್ಲಿ ಇರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಥೆ ವ್ಯಥೆ. ಈ ಸಂಬಂಧ ಈಗಾಗಲೇ ಇಲ್ಲಿನ ಜನಪ್ರತಿನಿಧಿಗಳಷ್ಟೇ ಅಲ್ಲದೇ, ವಿದ್ಯಾರ್ಥಿಗಳೂ ತಾಂತ್ರಿಕ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರಿಂದ, ಇದೀಗ ಇಲಾಖೆ ವಿಚಾರಣೆ ಆರಂಭಿಸಿದೆ.