ನನ್ನ ಪಕ್ಷಾಂತರದ ಪ್ರಭಾವ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆಅಧಿಕಾರದ ಆಸೆಗಾಗಿ ಬಿಜೆಪಿಯಲ್ಲಿ ಈಗ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ. ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ. 3-4 ಮಾಜಿ ಮುಖ್ಯಮಂತ್ರಿಗಳಿಗೆ ಬಿಜೆಪಿಯಿಂದ ಈ ಬಾರಿ ಟಿಕೆಟ್ ನೀಡಲಾಗಿದೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದು ಜಗದೀಶ ಶೆಟ್ಟರ್ ಹೇಳಿದ್ದಾರೆ.