ನಗರದಲ್ಲಿ ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರುಹುಬ್ಬಳ್ಳಿ- ಧಾರವಾಡ ಮಹಾನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.ಮಹಾನಗರದ ವಿವಿಧ ಬಡಾವಣೆಗಳಲ್ಲಿ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಸಿದ್ದು, ಕೆಲವೆಡೆ ಮರಗಳು ಧರಾಶಾಯಿಯಾಗಿವೆ.