ದುಡ್ಡು ಕೊಡಿ, ಮನೆ ಪಡಿ ಕಾಂಗ್ರೆಸ್ ಹೊಸ ಘೋಷವಾಕ್ಯ : ಜೋಶಿಸಚಿವ ಸಂತೋಷ ಲಾಡ್ ಮಾತೆತ್ತಿದರೆ ಬರೀ ಒಬಾಮಾ, ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಆಧಾರವಿಲ್ಲದೆ ಮಾತನಾಡುತ್ತಾರೆ. ಅವರ ಇಲಾಖೆ ಹಗರಣ ಹೊರ ಬಂದ ಮೇಲೆ, ಮಂತ್ರಿ ಪದವಿ ಉಳಿಸಿಕೊಳ್ಳಲು ಮೋದಿ ಅವರಿಗೆ ಬೈಯುತ್ತಿದ್ದಾರೆ. ಬಾಲಿಶವಾಗಿ ಮಾತನಾಡುತ್ತಿದ್ದು, ಅವರ ಹೇಳಿಕೆ ಪ್ರತಿಕ್ರಿಯಿಸಲ್ಲ.