ಹೊಸ ವರ್ಷದಿಂದ ತಾಲೂಕು ಮಟ್ಟದಲ್ಲೂ ಜನತಾ ದರ್ಶನಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದು, ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಮತ್ತು ನ್ಯಾಯಾಲಯ, ಪಾಲಸಿ ಸಂಬಂಧಿತ ಅಹವಾಲು ಹೊರತುಪಡಿಸಿ ಬಹುತೇಕ ಅಹವಾಲುಗಳನ್ನು ಸ್ಥಳಿಯವಾಗಿ ಪರಿಹರಿಸಲಾಗಿದೆ. ಜನವರಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಹಂತದಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.