ಅತ್ತ ಜಿಪಂ, ತಾಪಂ ಮೀಸಲು ಪ್ರಕಟ: ಇತ್ತ ಚಟುವಟಿಕೆ ಶುರುಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸದೇ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದೆ ಎಂದು ಕಾಂಗ್ರೆಸ್ ಪಕ್ಷ ನಿರಂತರವಾಗಿ ಆರೋಪಿಸುತ್ತಿತ್ತು. ಎಂಎಲ್‌ಸಿ, ಎಂಎಲ್‌ಎ ಚುನಾವಣೆಗಳಲ್ಲಿ ಇದನ್ನು ಒಂದು ಅಸ್ತ್ರವನ್ನಾಗಿ ಕಾಂಗ್ರೆಸ್ ಮಾಡಿಕೊಂಡಿದ್ದು ಸುಳ್ಳಲ್ಲ. ಇದೀಗ ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸುತ್ತಿದೆ. ಹೀಗಾಗಿ, ಕಾಂಗ್ರೆಸ್ಸಿಗರೆಲ್ಲರೂ ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರು. ಇದೀಗ ಸರ್ಕಾರ ಪ್ರತಿಕ್ಷೇತ್ರದ ಮೀಸಲನ್ನು ಪ್ರಕಟಿಸಿದೆ. ಇದರಿಂದಾಗಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಬಿರುಸುಗೊಂಡಂತಾಗಿದೆ.