ರಾಜ್ಯದಲ್ಲಿ 10 ಕೆಜಿ ಅಕ್ಕಿ ವಿತರಣೆ ಯಾವಾಗ ?ಕನ್ನಡಪ್ರಭ ವಾರ್ತೆ ಧಾರವಾಡಈಗಾಗಲೇ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ನೀಡುತ್ತಿದೆ. ರಾಜ್ಯ ಸರ್ಕಾರ 10 ಕೆಜಿ ಅಕ್ಕಿ ನೀಡುವುದು ಯಾವಾಗ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆಯಲ್ಲಿ 5 ಕೆಜಿ ಪಡಿತರ ಅಕ್ಕಿ ವಿತರಣೆ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ದೇಶದ 80 ಕೋಟಿ ಜನರಿಗೆ ಐದು ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಕರ್ನಾಟಕದ ಆರೂವರೆ ಕೋಟಿ ಜನಸಂಖ್ಯೆ ಪೈಕಿ ಶೇ.50ರಷ್ಟು ಜನರಿಗೆ ಇದರ ಲಾಭ ಸಿಗಲಿದೆ. ಚುನಾವಣೆ ಪೂರ್ವ 10 ಕೆಜಿ ಅಕ್ಕಿ ನೀಡುವುದಾಗಿ ಸಾರ್ವಜನಿಕವಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರು, ಇದೀಗ ಅಕ್ಕಿ ನೀಡುತ್ತಿಲ್ಲ ಏತಕೆ? ಎಂದು ಪ್ರಶ್ನಿಸಿದರು.