ದೇಶದಲ್ಲಿ ಬಿಜೆಪಿಯಿಂದ ಮತಗಳ್ಳತನ: ಸಲೀಂ ಅಹ್ಮದ ಆರೋಪದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಗತಿಸಿದರೂ ಸಹ ಬೆಲೆ ಏರಿಕೆ ನಿಯಂತ್ರಣವಾಗುತ್ತಿಲ್ಲ. ಬಿಜೆಪಿಯವರಿಗೆ ಜನಸಾಮಾನ್ಯರ ಮೇಲೆ ಕರುಣೆ ಇಲ್ಲದಂತಾಗಿದೆ. ದೇಶದಲ್ಲಿ ಬಿಜೆಪಿ ಮೇಲೆ ಜನರ ನಂಬಿಕೆ ಕಡಿಮೆಯಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ನೂರು ದಿನದಲ್ಲಿ ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ದರು. ಆದರೆ, ಈಗ ಅದರ ಬಗ್ಗೆ ಮಾತೇ ಇಲ್ಲ.