ಕರ್ನಾಟಕ ವಿದ್ಯಾವರ್ಧಕ ಸಂಘ ಇಡೀ ಕರ್ನಾಟಕ ಪ್ರತಿನಿಧಿಸಲಿಸಂಘವು ಧಾರವಾಡಕ್ಕೆ ಸೀಮಿತಗೊಳಿಸಿದೆ. ರಾಜ್ಯದ ಉದ್ದಗಲಕ್ಕೂ ವಿಸ್ತರಿಸುವ ಸಂಘದ ಸದಸ್ಯರ ಸಲಹೆಗೂ ಪದಾಧಿಕಾರಿಗಳು ಸಹಮತ ವ್ಯಕ್ತಪಡಿಸಿದರು. ಅಲ್ಲದೇ, ಸಂಘದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಮತ್ತು ಕನ್ನಡ ಪರ ಚಟುವಟಿಕೆಯನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಂಘಟಿಸಬೇಕು ಎಂಬ ಸಲಹೆಗಳು ಬಂದವು.