ಮಳೆಗಾಲ ನಿರ್ಲಕ್ಷಿಸದೇ ಎಚ್ಚರದಿಂದ ಕಾರ್ಯ ನಿರ್ವಹಿಸಿ: ಸಚಿವ ಲಾಡ್ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಿಂದ ತುಂಬಿ ಹರಿಯುತ್ತಿದ್ದು, ಯಾವುದೇ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ವಿದ್ಯುತ್ ತಂತಿಗಳು, ಕಂಬಗಳು ಬೀಳದ ಹಾಗೆ ಎಚ್ಚರವಹಿಸಿ ಯಾವುದೇ ಜೀವ ಹಾನಿ ಆಗದಂತೆ ನಿಗಾ ವಹಿಸಬೇಕು.