ನೇಮಕಾತಿ, ವಯೋಮಿತಿ ಹೆಚ್ಚಳಕ್ಕೆ ಧಾರವಾಡದಲ್ಲಿ ಬೃಹತ್ ಪ್ರತಿಭಟನೆಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಕಾಂತಕುಮಾರ್ ನೇತೃತ್ವದಲ್ಲಿ ಸುಮಾರು 3000ಕ್ಕೂ ಅಧಿಕ ಅಭ್ಯರ್ಥಿಗಳು ಸಪ್ತಾಪುರ, ಶ್ರೀನಗರ, ಕರ್ನಾಟಕ ಕಾಲೇಜು ಮೂಲಕ ಜ್ಯುಬಿಲಿ ವೃತ್ತದಲ್ಲಿ ಸಂಗಮವಾಗಿ ಸುಮಾರು 2 ಗಂಟೆ ಕಾಲ ರಸ್ತೆ ಬಂದ್ ಮಾಡಿ ಧರಣಿ ನಡೆಸಿದರು.