ಮಾರ್ಚ್‌ಗೆ ಮುಗಿಯಲಿದೆ ಸ್ಮಾರ್ಟ್‌ಸಿಟಿ ಅವಧಿ!2018ರಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ₹ 930 ಕೋಟಿ ವೆಚ್ಚದ ಯೋಜನೆಗಳನ್ನು ಕೈಗೊಳ್ಳಲಾಗಿದೆ. 48 ಕಿಮೀ ರಸ್ತೆ, ಚಿಟಗುಪ್ಪಿ ಆಸ್ಪತ್ರೆ, ಸ್ಮಾರ್ಟ್‌ಸ್ಕೂಲ್, ಜನತಾ ಬಜಾರ್, ಬೆಂಗೇರಿ ಮಾರುಕಟ್ಟೆ, ಇಂದಿರಾಗ್ಲಾಸ್ ಹೌಸ್, ಉಣಕಲ್ ಕೆರೆ ಅಭಿವೃದ್ಧಿ, ತೋಳನಕೇರಿ ಅಭಿವೃದ್ಧಿ, ಗ್ರೀನ್ ಕಾರಿಡಾರ್, ಹಳೇ ಬಸ್ ನಿಲ್ದಾಣ ಸೇರಿದಂತೆ ಬರೋಬ್ಬರಿ 63 ಯೋಜನೆಗಳನ್ನು ಕೈಗೆತ್ತಿಕೊಂಡಿತ್ತು. ಅದರಲ್ಲಿ 61 ಪೂರ್ಣಗೊಳಿಸಲಾಗಿದೆ.