ಸಾರಾಂಶ
ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.
ಧಾರವಾಡ:
ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಶಿ ಪಾಟೀಲ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.ಕೇಂದ್ರದ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಸಭೆ ಜರುಗಿಸಿ, ನಿಯಮಾನುಸಾರ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ನಂತರ ಬಮ್ಮಿಗಟ್ಟಿ ಗ್ರಾಮಸ್ಥರ, ಚುನಾಯಿತ ಪ್ರತಿನಿಧಿಗಳ ಹಾಗೂ ಜನಪ್ರತಿನಿಧಿಗಳ ಕುಂದು-ಕೊರತೆ ಸಭೆ ಜರುಗಿಸಿದರು. ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕರ್ತವ್ಯಕ್ಕೆ ಸರಿಯಾಗಿ ಆಗಮಿಸುವಂತೆ, ಆಸ್ಪತ್ರೆ ಮತ್ತು ಆಸ್ಪತ್ರೆಯ ಆವರಣ ಶುಚಿಯಾಗಿಟ್ಟುಕೊಳ್ಳಲು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಹಾಗೂ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು, ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ಕಾಲಕಾಲಕ್ಕೆ ಜರುಗಿಸುವಂತೆ, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಡಾ. ಶಶಿ ಪಾಟೀಲ ಸೂಚಿಸಿದರು.
ಸಭೆಯಲ್ಲಿ ಗ್ರಾಪಂ ಅಧ್ಯಕ್ಷ ಮಂಜುನಾಥ ದೂಳಿಕೊಪ್ಪ ಹಾಗೂ ಅಶೋಕ ಕಂದುನವರ, ಜಗದೀಶ ಮೆಣಸಿನಕಾಯಿ, ಶ್ರೀಶೈಲ, ಮಲ್ಲೇಶಪ್ಪ ಅಕ್ಕಿ ಮತ್ತು ಗ್ರಾಮಸ್ಥರು, ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.