ಗಣರಾಜ್ಯೋತ್ಸವ ಧ್ವಜಾರೋಹಣ ನಡೆಸಿ ಮನೆಗೆ ತೆರಳಿದಾಗ ಸಾವು

| Published : Jan 27 2024, 01:16 AM IST

ಗಣರಾಜ್ಯೋತ್ಸವ ಧ್ವಜಾರೋಹಣ ನಡೆಸಿ ಮನೆಗೆ ತೆರಳಿದಾಗ ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರು ಬಿಜೈ ನ್ಯೂ ರೋಡ್‌ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಗ್ಗೆ 7 ಗಂಟೆಗೆ ಅಪಾಟ್೯ಮೆಂಟ್‌ನ ಹಿರಿಯ ನಾಗರಿಕ, ನಿವೃತ್ತ ಸರ್ಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದು ಮೃತಪಟ್ಟರು.

ಕನ್ನಡಪ್ರಭ ವಾರ್ತೆ ಮಂಗಳೂರುಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವಿಗೀಡಾದ ಘಟನೆ ಶುಕ್ರವಾರ ನಡೆದಿದೆ.

ನಗರದ ಬಿಜೈ ನ್ಯೂ ರೋಡ್‌ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಗ್ಗೆ 7 ಗಂಟೆಗೆ ಅಪಾಟ್೯ಮೆಂಟ್‌ನ ಹಿರಿಯ ನಾಗರಿಕ, ನಿವೃತ್ತ ಸರ್ಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ತೆರಳಿದ್ದರು.

ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಮೂಲತಃ ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.ವಿವಿಧೆಡೆ 75ನೇ ಗಣರಾಜ್ಯೋತ್ಸವ

ಮೂಡುಬಿದಿರೆ ಇಲ್ಲಿನ ಪುರಸಭೆಯಲ್ಲಿ ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣ ಮಾಡಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು.ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಕಂದಾಯಾಧಿಕಾರಿ ಜ್ಯೋತಿ, ಸಿಬ್ಬಂದಿ ಸುಧೀಶ್ ಹೆಗ್ಡೆ, ತಿಲಕ್, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿದ್ದರು.ಸಮಾಜ ಮಂದಿರ ಆಚರಣೆಮೂಡುಬಿದಿರೆ ಸಮಾಜ ಮಂದಿರ ಸಭಾ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವ ಆಚರಿಸಲಾಯಿತು.ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು.ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಎಚ್.ಗಫೂರ್, ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್ ಕೋಟೆಕಾರ್ ಮತ್ತು ಸದಸ್ಯ ಮನೋಜ್ ಶೆಣೈ ಈ ಸಂದರ್ಭದಲ್ಲಿದ್ದರು.

ರೋಟರಿ ವಿದ್ಯಾ ಸಂಸ್ಥೆ:

ದೇಶದ ಪ್ರಗತಿಗಾಗಿ ನಿಯಮಗಳನ್ನು ರೂಪಿಸಿ ಪ್ರಜೆಗಳ ಜವಾಬ್ದಾರಿ ತಿಳಿಸುವ ಸಂವಿಧಾನದ ಮಾಹಿತಿ ಪ್ರತಿಯೊಬ್ಬ ಪ್ರಜೆಗೂ ಅಗತ್ಯವಾಗಿದೆ ಎಂದು ಮೂಡಬಿದಿರೆ ವಲಯ ಅರಣ್ಯಾಧಿಕಾರಿ ದಿನೇಶ್ ಜಿ.ಡಿ ಅಭಿಪ್ರಾಯಪಟ್ಟರು.ರೋಟರಿ ವಿದ್ಯಾಸಂಸ್ಥೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ರೋಟರಿ ಕ್ಲಬ್ ಅಧ್ಯಕ್ಷ ನಾಗರಾಜ್ ಬಿ., ಕಾರ್ಯದರ್ಶಿ ನಾಗರಾಜ್ ಹೆಗ್ಡೆ, ರೋಟರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ.ಎಂ., ಕಾರ್ಯದರ್ಶಿ ಅನಂತ ಕೃಷ್ಣರಾವ್, ಕಾಲೇಜಿನ ಸಂಚಾಲಕ ಜೆಡಬ್ಲ್ಯೂ ಪಿಂಟೋ, ಪ್ರಾಂಶುಪಾಲೆ ರೂಪಾ ಮಸ್ಕರೇನಸ್, ರೋಟರಿ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್, ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ತಿಲಕಾ ಅನಂತವೀರ ಜೈನ್, ಸಂಚಾಲಕ ಪ್ರವೀಣ್ ಚಂದ್ರ ಜೈನ್ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ನಿಶಾ, ನಾರಾಯಣಿ ಕಾರ್ಯಕ್ರಮ ನಿರೂಪಿಸಿದರು.