ಹಾವೇರಿ ಜಿಲ್ಲೆಯಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಅಭಾವ ಮುಂದುವರೆದಿದೆ. ಇದರಿಂದ ಪೆಟ್ರೋಲ್ ಬಂಕ್‌ಗಳ ಎದುರು ವಾಹನಗಳು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.

ಹಾವೇರಿ: ಜಿಲ್ಲೆಯಲ್ಲಿ ಡೀಸೆಲ್ ಹಾಗೂ ಪೆಟ್ರೋಲ್ ಅಭಾವ ಮುಂದುವರೆದಿದೆ. ಇದರಿಂದ ಪೆಟ್ರೋಲ್ ಬಂಕ್‌ಗಳ ಎದುರು ವಾಹನಗಳು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.ಹಾವೇರಿ, ರಾಣಿಬೆನ್ನೂರು, ಶಿಗ್ಗಾಂವಿ, ಸವಣೂರು, ಹಾನಗಲ್ಲ, ಬ್ಯಾಡಗಿ, ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕಿನ ಹಲವೆಡೆ ಡೀಸೆಲ್ ಮತ್ತು ಪೆಟ್ರೋಲ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.ವಿಶೇಷವಾಗಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ಈ ಸಂದರ್ಭದಲ್ಲಿ ಡೀಸೆಲ್ ಕೊರತೆ ರೈತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಟ್ರ್ಯಾಕ್ಟರ್, ಟಿಲ್ಲರ್ ಸೇರಿದಂತೆ ಕೃಷಿ ಯಂತ್ರೋಪಕರಣಗಳಿಗೆ ಅಗತ್ಯವಿರುವ ಡೀಸೆಲ್ ಸಿಗದೆ ಬಿತ್ತನೆ ಕಾರ್ಯಕ್ಕೆ ಸಮಸ್ಯೆಯಾಗುತ್ತಿದೆ. ದೂರದ ಊರುಗಳಿಂದ ಬಂದ ರೈತರು ಹಾಗೂ ವಾಹನ ಸವಾರರು ಇಂಧನಕ್ಕಾಗಿ ಪರದಾಡುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಇಂಧನ ಸರಬರಾಜು ವ್ಯವಸ್ಥೆಯನ್ನು ತಕ್ಷಣ ಸರಿಪಡಿಸಿ, ಜಿಲ್ಲೆಯಲ್ಲಿ ಸಮರ್ಪಕ ಪ್ರಮಾಣದಲ್ಲಿ ಡಿಸೇಲ್ ಹಾಗೂ ಪೆಟ್ರೋಲ್ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಹಾಗೂ ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.