ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ವಿಭಿನ್ನ ಯೋಗ ದಿನ

| Published : Jun 22 2024, 12:54 AM IST

ಸಾರಾಂಶ

ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆಗಳನ್ನು ತೊಟ್ಟು ಯೋಗಾಸನದ ಚಿಹ್ನೆ ಆಕಾರವನ್ನು ರಚಿಸಿ ವಿಶೇಷವಾಗಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಿದರು.

ವಿಜಯಪುರ: ನಗರದ ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಶಿಶುನಿಕೇತನ ಶಾಲೆಯಲ್ಲಿ ಒಂದು ಸಾವಿರ ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆಗಳನ್ನು ತೊಟ್ಟು ಯೋಗಾಸನದ ಚಿಹ್ನೆ ಆಕಾರವನ್ನು ರಚಿಸಿ ವಿಶೇಷವಾಗಿ ಅಂತಾರಾಷ್ಟ್ರೀಯ ಯೋಗದಿನ ಆಚರಿಸಿದರು.

ಸಂಸ್ಥೆಯ ಅಧ್ಯಕ್ಷ ಬಸಯ್ಯ ಹಿರೇಮಠ, ಶಾಲೆಯ ನಾಮನಿರ್ದೇಶಿತ ಚೇರಮನ್ ಸಂಗನಗೌಡ ನಾಡಗೌಡ ಅವರು ಅಂತಾರಾಷ್ಟ್ರೀಯ ಯೋಗ ದಿನದ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿದರು. ಸಂಸ್ಥೆಯ ನಿರ್ದೇಶಕರು, ಸದಸ್ಯರು, ಸಿಇಒ ಡಾ.ಎಚ್.ವೆಂಕಟೇಶ, ಪ್ರಾಂಶುಪಾಲೆ ವಿಜಯಲಕ್ಷ್ಮಿ ಪಟ್ಟೇದ, ಉಪಪ್ರಾಂಶುಪಾಲೆ ಶ್ರೀದೇವಿ ಕನ್ನಾಳ, ಮಹೇಶ ಸಂಬಣ್ಣಿ, ಶಾಲೆಯ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ ಹಾಗೂ ಶಾಲೆಯ ಸಾವಿರಾರು ಮಕ್ಕಳು ಭಾಗವಹಿಸಿದ್ದರು.