ರಾಮನಗರ: ಮಾಸಾಶನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ವಿಶೇಷ ಚೇತನರು ಸೋಮವಾರ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು
ರಾಮನಗರ: ಮಾಸಾಶನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ವಿಶೇಷ ಚೇತನರು ಸೋಮವಾರ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಈ ವೇಳೆ ಕೆಲ ಕಾಲ ವಾಹನಗಳ ಸಂಚಾರ ಅಸ್ತವ್ಯವಸ್ಥಗೊಂಡಿತು. ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆಯಿತು.ಸಚಿವ ಸಂಪುಟದಲ್ಲಿ ನಮ್ಮ ಬೇಡಿಕೆಗಳ ಕುರಿತು ವಿಷಯ ಪ್ರಸ್ತಾಪಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಬಾಲಕೃಷ್ಣ ನಮಗೆ ಭರವಸೆ ನೀಡಿದ್ದರು. ಈ ಭರವಸೆಯ ಮೇರೆಗೆ ನಾವು ಧರಣಿಯನ್ನು ಶಾಂತಿಯುತವಾಗಿ ಮುಂದುವರೆಸಿದ್ದೇವೆ. ಆದರೆ ಸಂಪುಟದಲ್ಲಿ ನಮ್ಮ ಬೇಡಿಕೆಗೆ ಸ್ಪಂದನೆ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇವೆ ಖಾಯಂ ಮಾಡುವುದು, ವಿಶೇಷಚೇತನರ ಮಾಸಾಶನ ಹೆಚ್ಚಳ, ಬಾಕಿ ಮಾಸಾಶನ ಬಿಡುಗಡೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ನವ ಕರ್ನಾಟಕ ವಿಕಲಚೇತನ ಗೌರವಧನ ಕಾರ್ಯಕರ್ತರ ಸಂಘದ ವತಿಯಿಂದ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವ ಬಾಲಕೃಷ್ಣ ಅವರು ನೀಡಿದ್ದ ಭರವಸೆ ಇದೀಗ ಹುಸಿಯಾಗಿದೆ. ಸುಳ್ಳು ಆಶ್ವಾಸನೆ ಬೇಡ ಅಧಿಕೃತ ಆದೇಶ ಪತ್ರ ನೀಡಿ ಎಂಬ ಘೋಷಣೆಗಳೊಂದಿಗೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
6ಕೆಆರ್ ಎಂಎನ್ 8.ಜೆಪಿಜಿವಿಶೇಷ ಚೇತನರು ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು.