‘ಡಿಜಿಟಲ್ ಲೋಕೊಡ್ ತುಳು’ ಒಂದು ದಿನದ ಬರವಣಿಗೆ ಕಮ್ಮಟ

| Published : Aug 31 2025, 02:00 AM IST

ಸಾರಾಂಶ

ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಡಿಜಿಟಲ್ ಲೋಕೊಡ್ ತುಳು’ ಒಂದು ದಿನದ ಬರವಣಿಗೆ ಕಮ್ಮಟ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ವಿದ್ಯಾರ್ಥಿಗಳಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ಆಸಕ್ತಿ ಮೂಡುವಂತೆ ಮಾಡಲು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಫಿಕಾಡ್ ಹೇಳಿದರು.

ಆಳ್ವಾಸ್ ಕಾಲೇಜಿನ (ಸ್ವಾಯತ್ತ) ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಶನಿವಾರ ಕಾಲೇಜಿನಲ್ಲಿ ಆಯೋಜಿಸಲಾದ ‘ಡಿಜಿಟಲ್ ಲೋಕೊಡ್ ತುಳು’ ಒಂದು ದಿನದ ಬರವಣಿಗೆ ಕಮ್ಮಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ತುಳು ಭಾಷೆಯನ್ನು ಬೆಳೆಸುವುದರೊಂದಿಗೆ ಅದರ ಶ್ರೀಮಂತ ಸಂಸ್ಕೃತಿಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.ಸಂತ ಅಲೋಶಿಯಸ್ ಪರಿಗಣಿತ ವಿವಿಯ ನಿವೃತ್ತ ಪ್ರಾಧ್ಯಾಪಕ ಡಾ. ವಿಶ್ವನಾಥ ಬದಿಕಾನ ಕಮ್ಮಟ ನಡೆಸಿಕೊಟ್ಟರು.ಕಮ್ಮಟದಲ್ಲಿ ಕಾಲೇಜಿನ ೫೦ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಅಕಾಡೆಮಿಯ ಸದಸ್ಯ ಪಾಂಗಳ ಬಾಬು ಕೊರಗ, ಪ್ರಾಂಶುಪಾಲ ಡಾ. ಕುರಿಯನ್ ಇದ್ದರು. ಡಾ. ಯೋಗೀಶ ಕೈರೋಡಿ ಸ್ವಾಗತಿಸಿದರು. ಸೌಮ್ಯ ಕುಂದರ್ ನಿರೂಪಿಸಿದರು. ಅನಿಶಾ ಶೆಟ್ಟಿ ವಂದಿಸಿದರು.