ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 29ರಂದು ಸಮಸ್ತ ಒಕ್ಕಲಿಗ ಸಮುದಾಯದ ನೇತೃತ್ವದಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್. ಎಂ. ದಿನೇಶ್ ಹಾಗೂ ಲೋಹಿತ್ ಗಣೇಶ್ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯುವಜನತೆಗೆ ಅವರ ಜೀವನ ಸಂದೇಶವನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚೇತನ್ ಸಿ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಮಂಜುಳ ಹಾಜರಿದ್ದರು.
ಬೇಲೂರು: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 29ರಂದು ಸಮಸ್ತ ಒಕ್ಕಲಿಗ ಸಮುದಾಯದ ನೇತೃತ್ವದಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಹಿನ್ನಲೆಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್. ಎಂ. ದಿನೇಶ್ ಹಾಗೂ ಲೋಹಿತ್ ಗಣೇಶ್ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು
ಈ ಕುರಿತು ಮಾತನಾಡಿದ ಒಕ್ಕಲಿಗರ ಸಂಘದ ನಿರ್ದೇಶಕ ಯು.ಟಿ. ಕೇಶವಮೂರ್ತಿ, ನಾಡಪ್ರಭು ಕೆಂಪೇಗೌಡರು ಕನ್ನಡ ನಾಡಿನ ನಿರ್ಮಾಣದಲ್ಲಿ ಹಾಗೂ ಬೆಂಗಳೂರು ನಗರದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಅವರ ಆದರ್ಶಗಳು ಮತ್ತು ಸಮಾಜಮುಖಿ ಚಿಂತನೆಗಳು ಇಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಿದ್ದು, ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯುವಜನತೆಗೆ ಅವರ ಜೀವನ ಸಂದೇಶವನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಚೇತನ್ ಸಿ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಮಂಜುಳ ಹಾಜರಿದ್ದರು.