ಕನಕಪುರ: ಲಿಂಗೈಕ್ಯರಾದ ತಾಲೂಕಿನ ದೇಗುಲ ಮಠದ ಹಿರಿಯ ಶ್ರೀ ಡಾ.ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಗಣ್ಯರು ಹಾಗೂ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು
ಕನಕಪುರ: ಲಿಂಗೈಕ್ಯರಾದ ತಾಲೂಕಿನ ದೇಗುಲ ಮಠದ ಹಿರಿಯ ಶ್ರೀ ಡಾ.ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಗಣ್ಯರು ಹಾಗೂ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು.
ಶ್ರೀ ಮಠದ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಮಠದ ಭಕ್ತರು ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ರೀಗಳ ಅಂತಿಮ ದರ್ಶನ ಪಡೆದರು. ಲಿಂಗೈಕ್ಯ ಶ್ರೀಗಳಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕುಶಾಲು ತೋಪು ಹಾರಿಸಿ ರಾಷ್ಟ್ರಧ್ವಜ ಸಮರ್ಪಿಸಿ ಗೌರವ ವಂದನೆ ಸಲ್ಲಿಸಿ ನಂತರ ರಾಷ್ಟ್ರಧ್ವಜವನ್ನು ಮಠದ ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿ ಭಾವುಕರಾದರು.ಮಧ್ಯಾಹ್ನ 3 ಗಂಟೆಗೆ ಶ್ರೀಗಳ ಮೃತದೇಹವನ್ನು ಅಲಂಕೃತ ಸಾರೋಟಿನಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿತ್ತು. ಸಾರ್ವಜನಿಕರು ಶ್ರೀಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದ್ದರು. ಮೆರವಣಿಗೆ ನಂತರ ಶ್ರೀಗಳ ಪಾರ್ಥಿವ ಶರೀರವನ್ನು ಶ್ರೀ ಮಠದ ಆವರಣದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ರಿಯಾ ಸಮಾಧಿ ಮಾಡಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.
ಕೇಂದ್ರ ಸಚಿವರು ಹಾಗೂ ಶ್ರೀ ಮಠದ ಹಿರಿಯ ವಿದ್ಯಾರ್ಥಿ ವಿ.ಸೋಮಣ್ಣ, ಕೇಂದ್ರ ಸಚಿವ ಕುಮಾರಸ್ವಾಮಿ, ಸಂಸದ ಡಾ. ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ನಾಗರಾಜು, ಕಾಂಗ್ರೆಸ್ ಮುಖಂಡರಾದ ಆರ್.ಕೃಷ್ಣಮೂರ್ತಿ, ಕೆ.ಎನ್. ದಿಲೀಪ್ ಇತರರು ಶ್ರೀಗಳ ಅಂತಿಮ ದರ್ಶನ ಪಡೆದರು.ಕೆ ಕೆ ಪಿ ಸುದ್ದಿ 02(1)
ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ.ಕೆ ಕೆ ಪಿ ಸುದ್ದಿ 2(2) :
ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ಡಾ. ಮಂಜುನಾಥ್.ಕೆ ಕೆ ಪಿ ಸುದ್ದಿ 02(3) :
ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಹಾಗೂ ಮಠದ ಹಿರಿಯ ವಿದ್ಯಾರ್ಥಿ ವಿ. ಸೋಮಣ್ಣ ದಂಪತಿ.