ಸಾರಾಂಶ
ಹಾನಗಲ್ಲ ತಾಲೂಕಿನ ಹೀರೂರು ಗ್ರಾಮದಲ್ಲಿ ಶಿಥಿಲಗೊಂಡ ಕಟ್ಟಡದಲ್ಲಿಯೇ ಅಂಗನವಾಡಿ ನಡೆಸುತ್ತಿದೆ. ಮಕ್ಕಳ ಪಾಲಕರು ಆತಂಕಗೊಂಡಿದ್ದಾರೆ.
ಹಾನಗಲ್ಲ: ತಾಲೂಕಿನ ಹೀರೂರು ಗ್ರಾಮದಲ್ಲಿ ಶಿಥಿಲಗೊಂಡ ಕಟ್ಟಡದಲ್ಲಿಯೇ ಅಂಗನವಾಡಿ ನಡೆಸುತ್ತಿದೆ. ಮಕ್ಕಳ ಪಾಲಕರು ಆತಂಕಗೊಂಡಿದ್ದಾರೆ.ಗ್ರಾಮದಲ್ಲಿ ಮೂರುವ ಮೂರು ಅಂಗನವಾಡಿಗಳಿವೆ. ಅದರಲ್ಲಿ ಒಂದು ಉರ್ದು ಮಕ್ಕಳಿಗಾಗಿರುವ ಅಂಗನವಾಡಿ ಉರ್ದು ಪ್ರಾಥಮಿಕ ಶಾಲೆಯ ಆವರಣದಲ್ಲಿಯೇ ನಡೆಯುತ್ತದೆ. ಇಲ್ಲಿ 38 ಮಕ್ಕಳಿದ್ದಾರೆ. ಆದರೆ ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದರೂ ಇಲ್ಲಿಯೇ ಅಂಗನವಾಡಿ ನಡೆಸುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹತ್ತಾರು ಬಾರಿ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮನವಿ ಸಲ್ಲಿಸಿ ಅಂಗನವಾಡಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಮಾಡಿದ ಮನವಿಗಳು ಏನೂ ಪ್ರಯೋಜನವಾಗಿಲ್ಲ. ಇಲಾಖೆ ಮಾತ್ರ ಜಾಣ ಕುರುಡು ನೀತಿ ಅನುಸರಿಸುತ್ತಿದೆ.
ತಾಲೂಕಿನ ಹೀರೂರು ಗ್ರಾಮದ ಉರ್ದು ಮಕ್ಕಳ ಅಂಗನವಾಡಿ ಕಟ್ಟಡ ಶಿಥಿಲಗೊಂಡ ಬಗ್ಗೆ ಇಲಾಖೆಯ ಗಮನಕ್ಕೆ ತರಲಾಗಿದೆ. ಕೂಡಲೇ ಈ ಅಂಗನವಾಡಿಯನ್ನು ಇದೇ ಆರಣದಲ್ಲಿರುವ ಉರ್ದು ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತದೆ. ಅಲ್ಲದೆ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಬೇಡಿಕೆಯನ್ನು ಸಲ್ಲಿಸಲಾಗಿದೆ ಎಂದು ಅಂಗನವಾಡಿ ಮೇಲ್ವಿಚಾರಕಿ ರಾಜೇಶ್ವರಿ ಬಿ. ಹೇಳಿದರು.