ಸಾರಾಂಶ
ಪಟ್ಟಣದ ಸಿ.ಎಲ್.ಇ ಸಂಸ್ಥೆಯ ಕೆ.ಕೆ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮಿಲನ ಕಾರ್ಯಕ್ರಮಕ್ಕೆ ಮಾರುತಿ ಎಸ್. ಕಾಮತ್ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ವಿದ್ಯಾರ್ಥಿಗಳು ಶ್ರದ್ಧಾ, ಭಕ್ತಿಯಿಂದ ಶಿಕ್ಷಣವನ್ನು ಕಲಿತಾಗ ಮಾತ್ರ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಿಬಿಎಸ್‌ಇ ತರಬೇತಿ ವಿಭಾಗದ ಸಂಪನ್ಮೂಲ ವ್ಯಕ್ತಿ ಮಾರುತಿ ಎಸ್. ಕಾಮತ್ ಹೇಳಿದರು.ಪಟ್ಟಣದ ಸಿ.ಎಲ್.ಇ ಸಂಸ್ಥೆಯ ಕೆ.ಕೆ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮಿಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳುಳ್ಳ ಶಿಕ್ಷಣವನ್ನು ಕಲಿಸಿದಾಗ ಮಾತ್ರ ಆತ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದರು.
ಎನ್.ಎಸ್.ವಂಟಮುತ್ತೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶಾಲೆಯ ವಾತಾವರಣ ಹಾಗೂ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ಸಾಗರ ಐ.ಬಿಸ್ಕೋಪ್ ಬಹುಮಾನ ವಿತರಿಸಿದರು. ಶಾಲೆಯ ಪ್ರಾಚಾರ್ಯ ಸ್ಮೀತಾ ಎನ್.ಶಿಂಧೆ ಶಾಲೆಯ ವರದಿ ಮಂಡಿಸಿದರು. ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಅದ್ಧೂರಿಯಾಗಿ ಜರುಗಿದವು. ಸಿಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಎಲ್ಲ ಅಂಗಸಂಸ್ಥೆಯ ಮುಖ್ಯಸ್ಥರು, ಸಿಬ್ಬಂದಿ ವರ್ಗ, ಪಾಲಕರು ಉಪಸ್ಥಿತರಿದ್ದರು.