ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಆಸಕ್ತಿ ಮುಖ್ಯ: ಶಾಸಕ ದೇಶಪಾಂಡೆ

| Published : Dec 26 2024, 01:02 AM IST

ವಿದ್ಯಾರ್ಥಿ ಜೀವನದಲ್ಲಿ ಶ್ರದ್ಧೆ, ಆಸಕ್ತಿ ಮುಖ್ಯ: ಶಾಸಕ ದೇಶಪಾಂಡೆ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ಬಂಗಾರದಂಥ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಅಭ್ಯಾಸದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ದೈಹಿಕವಾಗಿ ಆರೋಗ್ಯವಾಗಿ ಇರಲು ಕ್ರೀಡೆಗಳಿಗೆ ಆದ್ಯತೆ ನೀಡಿ ಜಿಲ್ಲಾಮಟ್ಟ, ರಾಜ್ಯಮಟ್ಟದಲ್ಲಿ ಮಿಂಚಬೇಕು.

ದಾಂಡೇಲಿ: ದಾನ ಮಾಡುವ ಮನಸ್ಥಿತಿ ಉಳ್ಳವನು ದಾನ ಮಾಡಿದರೆ ದೇವರಿಗೆ ಹತ್ತಿರವಾಗುತ್ತಾನೆ. ಇಲ್ಲವಾದರೆ ಎಷ್ಟೇ ಸಂಪತ್ತಿದ್ದರೂ ವ್ಯರ್ಥವೆಂದು ಸಂಪತ್ತು ಮಾಡಿದರೆ ಸಾಲದು. ಅದನ್ನು ಸಮಾಜದ ಸತ್ಕಾರ್ಯಗಳಿಗೆ ಉಪಯೋಗಿಸಬೇಕು ಎಂದು ಆಡಳಿತ ಸುಧಾರಣಾ ಸಮಿತಿ ಅಧ್ಯಕ್ಷ ಆರ್.ವಿ. ದೇಶಪಾಂಡೆ ತಿಳಿಸಿದರು.ಹಳೇ ದಾಂಡೇಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೇಪರ್ ಮಿಲ್‌ನ ಸಿಎಸ್‌ಆರ್ ಯೋಜನೆ ಅಡಿಯಲ್ಲಿ ₹14 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಕೊಠಡಿಯ ಚಾವಣಿ ಸಭಾಭವನ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಬಂಗಾರದಂಥ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಶ್ರದ್ಧೆಯನ್ನು ರೂಢಿಸಿಕೊಳ್ಳಬೇಕು. ಅಭ್ಯಾಸದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಗೂ ದೈಹಿಕವಾಗಿ ಆರೋಗ್ಯವಾಗಿ ಇರಲು ಕ್ರೀಡೆಗಳಿಗೆ ಆದ್ಯತೆ ನೀಡಿ ಜಿಲ್ಲಾಮಟ್ಟ, ರಾಜ್ಯಮಟ್ಟದಲ್ಲಿ ಮಿಂಚಬೇಕು ಎಂದರು.

ಕಾಲೇಜಿನ ಪ್ರಾಚಾರ್ಯೆ ನಾಗರೇಖ ಗಾಂವಕರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವೆಸ್ಟ್‌ಕೋಸ್ಟ್ ಪೇಪರ್ ಮಿಲ್ ಸಹಕಾರದಿಂದ ಈ ಸಭಾಭವನ ನಿರ್ಮಾಣ ಆಗಿದೆ. ಸಂಘ- ಸಂಸ್ಥೆಗಳು ಸಹಾಯದಿಂದ ಕಾಲೇಜಿನಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಹಾಗೂ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದರು.ನಗರಸಭೆ ಅಧ್ಯಕ್ಷ ಅಶ್ಫಾಕ್ ಶೇಖ, ವೆಸ್ಟ್‌ಕೋಸ್ಟ್ ಪೇಪರ್ ಮಿಲ್‌ನ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಜೇಶ್ ತಿವಾರಿ, ರಾಘವೇಂದ್ರ ಆರ್.ಜೆ., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಮಹಾದೇವ ಜಮಾದಾರ, ಅನಿಲ ನಾಯ್ಕರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸರ್ಫರಾಜ್ ಬಾಬಾ ಮುಲ್ಲಾ ಇದ್ದರು.

ಉಪನ್ಯಾಸಕಿ ಸುಮಂಗಳ ನಾಯಕ, ಪೂರ್ಣಿಮಾ ಬೆಳವಡಿ, ಪ್ರಶಾಂತ ಜಾಧವ, ಪ್ರವೀಣಕುಮಾರ ಸುಲಾಖೆ, ಶ್ವೇತಾ ಎಂ.ಎಚ್., ವಿದ್ಯಾ ಉಪ್ಪಾರ, ಸಂಜನಾ ಕನೋಜ, ಅನುಷಾ ಅಂಕೋಲೆಕರ, ಉಷಾ ಸಲಗಾಂವಕರ, ಮಂಜುಳಾ ಹಳಿಯಾಳಕರ, ಮಾಯವ್ವ, ಅನಿತಾ ಅನಗಲಾದ ಅವರು ಕಾರ್ಯಕ್ರಮಕ್ಕೆ ಸಹಕರಿಸಿದರು.29ರಂದು ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ, ಪ್ರಶಸ್ತಿ ಪ್ರದಾನ

ಕುಮಟಾ: ಪಂ. ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ- 2024 ಹಾಗೂ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಕಾರ್ಯಕ್ರಮ ಡಿ. 29ರಂದು ಕೂಜಳ್ಳಿ ಕುಳಿಹಕ್ಕಲಿನ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ.ಪಂ. ವಿನಾಯಕ ತೊರ್ವಿ ಅವರಿಗೆ ಈ ಬಾರಿ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ.ದಿನವಿಡೀ ವೈವಿಧ್ಯಮಯ ಸಂಗೀತ ಕಾರ್ಯಕ್ರಮ ನಡೆಯಲಿದೆ. ಪಂ. ವಿನಾಯಕ ತೊರ್ವಿ, ಮುಂಬೈನ ಕೃಷ್ಣ ಭಟ್ಟ ಅವರ ಗಾಯನ, ಮುಂಬೈನ ರಾಜನ್ ಮಾಶೇಲ್ಕರ ಅವರ ವಯೋಲಿನ್, ಬಸವರಾಜ ಭಜಂತ್ರಿ ಹೆಡಿಗ್ಗೊಂಡ ಅವರ ಶಹನಾಯಿ ವಾದನ ಕಾರ್ಯಕ್ರಮ, ಬಾರ್ಕೂರಿನ ಇಂದಿರಾ ಎಂ. ಭಟ್ಟ, ವಿನಾಯಕ ಹೆಗಡೆ ಹಿರೇಹದ್ದ ಅವರ ಗಾಯನ, ಭಾರ್ಗವ ಭಟ್ಟ ಮತ್ತು ಅಜಯ ಹೆಗಡೆ ಅವರ ಬಾನ್ಸುರಿ- ಹಾರ್ಮೋನಿಯಂ ಜುಗಲ್ಬಂಧಿ ಕಾರ್ಯಕ್ರಮ ನಡೆಯಲಿದೆ.ತಬಲಾದಲ್ಲಿ ಗುಣವಂತೆಯ ಎನ್.ಜಿ. ಅನಂತಮೂರ್ತಿ, ಮುಂಬೈನ ಗುರುಶಾಂತ ಸಿಂಗ್, ಹೊಸಗದ್ದೆ ಮಹೇಶ ಹೆಗಡೆ, ಬೆಂಗಳೂರಿನ ಯೋಗೀಶ ಭಟ್ಟ, ಕಡತೋಕಾದ ವಿನೋದ ಭಂಡಾರಿ, ಹರಿಕೇರಿ ಗಣಪತಿ ಹೆಗಡೆ, ಅಂಸಳ್ಳಿ ಅಕ್ಷಯ ಭಟ್ಟ ಸಹಕರಿಸುವರು. ಕೂಜಳ್ಳಿ ಗೌರೀಶ ಯಾಜಿ, ವರ್ಗಾಸರದ ಅಜೇಯ ಹೆಗಡೆ ಸಂವಾದಿನಿ ಸಾಥ್ ನೀಡುವರು.

ಬೆಳಗ್ಗೆ 9 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಪಂ. ಬಸವರಾಜ ಭಜಂತ್ರಿ, ಹೆಡಿಗ್ಗೊಂಡ, ಸ್ವರ ಸಂಗಮದ ಅಧ್ಯಕ್ಷ ಎಸ್.ಜಿ. ಭಟ್ಟ, ಷಡಕ್ಷರಿ ಗವಾಯಿ ಅಕಾಡೆಮಿ ಖಜಾಂಚಿ ಎಸ್.ಎನ್. ಭಟ್ಟ ಭಾಗವಹಿಸುವರು.

ಪ್ರಶಸ್ತಿ ಪ್ರದಾನ:

ಅಂದು ಸಂಜೆ 4 ಗಂಟೆ ಷಡಕ್ಷರಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮೇರು ಗಾಯಕ ಬೆಂಗಳೂರಿನ ವಿನಾಯಕ ತೊರ್ವಿ ಅವರಿಗೆ ಪುರಸ್ಕಾರ ನೀಡಲಾಗುವುದು. ಪ್ರಾಧ್ಯಾಪಕ, ಗುಣವಂತೆಯ ಡಾ. ನರಸಿಂಹ ಪಂಡಿತ, ಉಡುಪಿ ಆಭರಣ ಗ್ರೂಪ್‌ನ ಸಂಧ್ಯಾ ಸುಭಾಷ ಕಾಮತ್, ಹುಬ್ಬಳ್ಳಿಯ ರಂಗನಾಥ ಕಮತರ, ವೇಲಾ ಟೆಕ್ನಾಲಜಿಸ್‌ನ ಗಿರೀಶ ಹೆಗಡೆ, ಲೆಕ್ಕ ಪರಿಶೋಧಕ ಸಚಿನ್ ಬಿ.ಆರ್. ಪಾಲ್ಗೊಳ್ಳುವರು. ಷಡಕ್ಷರಿ ಗವಾಯಿ ಅಕಾಡೆಮಿಯ ಅಧ್ಯಕ್ಷ ವಸಂತರಾವ್ ಅಧ್ಯಕ್ಷತೆ ವಹಿಸುವರು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.