ಸಾರಾಂಶ
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಹಾ ನಗರಪಾಲಿಕೆ ಮಾಜಿ ಸದಸ್ಯ ದಿನೇಶ ಕೆ. ಶೆಟ್ಟಿ ನೇಮಕಗೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ, ದಾವಣಗೆರೆ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಹಾ ನಗರಪಾಲಿಕೆ ಮಾಜಿ ಸದಸ್ಯ ದಿನೇಶ ಕೆ. ಶೆಟ್ಟಿ ನೇಮಕಗೊಂಡಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯಕರ್ತರ, ಅಧ್ಯಕ್ಷರಾಗಿ ಪಕ್ಷದಲ್ಲಿ ಹಂತ ಹಂತವಾಗಿ ಬೆಳೆದು ಬಂದ ಸಿವಿಲ್ ಎಂಜಿನಿಯರಿಂಗ್ ಪದವೀಧರ ದಿನೇಶ ಕೆ. ಶೆಟ್ಟಿ ಅವರು ಹಾಕಿ ಹಾಗೂ ಕ್ರಿಕೆಟ್ ಪಟುವಾಗಿದ್ದಾರೆ. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಗಿರುವ ದಿನೇಶ ಶೆಟ್ಟಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ದೂಡಾ ಅಧ್ಯಕ್ಷರಾಗಿ ಸರ್ಕಾರ ನೇಮಿಸಿದೆ.ದಾವಣಗೆರೆ ಕ್ರಿಕೆಟ್ ಕ್ಲಬ್, ಜಿಲ್ಲಾ ಚೆಸ್ ಅಸೋಸಿಯೇಷನ್ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿರುವ ದಿನೇಶ ಶೆಟ್ಟಿ ಸೇವೆ ಗುರುತಿಸಿ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಶಿಫಾರಸಿನ ಮೇರೆಗೆ ಸರ್ಕಾರ ದೂಡಾ ಅಧ್ಯಕ್ಷರಾಗಿ ದಿನೇಶ ಶೆಟ್ಟಿ ಅವರಿಗೆ ನೇಮಿಸಿ, ಆದೇಶ ಹೊರಡಿಸಿದೆ.
- - - -23ಕೆಡಿವಿಜಿ22: ದಾವಣಗೆರೆ ದೂಡಾ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ ಕೆ. ಶೆಟ್ಟಿ.