ಸಾರಾಂಶ
ಯಾದಗಿರಿ:ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಂಟಾಗುವ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರತಿ ತಿಂಗಳು ಮೊದಲನೇ ಸೋಮವಾರ ಮಧ್ಯಾಹ್ನ 3.30 ರಿಂದ ಸಂಜೆ 5.30 ಗಂಟೆಯವರೆಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ವಿಭಾಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ಸೆ.2ರಂದು ಸೋಮವಾರ ಮಧ್ಯಾಹ್ನ 3.30 ರಿಂದ ಸಂಜೆ 5.30 ಗಂಟೆಯ ವರೆಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಯಾದಗಿರಿ ವಿಭಾಗದವರು ಜಿಲ್ಲೆಯ ಸಾರಿಗೆ ಸಮಸ್ಯೆಗಳ ಕುರಿತು ಸಾರ್ವಜನಿಕರೊಂದಿಗೆ ನೇರವಾಗಿ ಮಾತನಾಡಲಿದ್ದಾರೆ.ಸಾರ್ವಜನಿಕರು ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಮ್ಮ ಸಾರಿಗೆ ವ್ಯವಸ್ಥೆ ಕುರಿತು ಇರುವ ಸಮಸ್ಯೆಗಳನ್ನು ತಿಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ. ದೂ: 6366423882, 7760992452, 7760992450 ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.