ಎಡದಂಡೆ ನಾಲೆಗೆ ನೀರು ಹರಿಸಿರುವುದರಿಂದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಧಿಕಾರಿಗಳು ಭರ್ತಿ ಮಾಡಿಕೊಳ್ಳಬೇಕು ಎಂದು ಎಂದು ಜಿ.ಪಂ. ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರ್ ಸೂಚನೆ ನೀಡಿದರು.
ಸಿಂಧನೂರು: ಎಡದಂಡೆ ನಾಲೆಗೆ ನೀರು ಹರಿಸಿರುವುದರಿಂದ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಅಧಿಕಾರಿಗಳು ಭರ್ತಿ ಮಾಡಿಕೊಳ್ಳಬೇಕು ಎಂದು ಎಂದು ಜಿ.ಪಂ. ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರ್ ಸೂಚನೆ ನೀಡಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಜನವರಿ ತಿಂಗಳವರೆಗೂ ಕಾಲುವೆಗೆ ನೀರು ಬರುವುದಿಲ್ಲ. ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ನೀರಿನ ತೊಂದರೆ ಉಂಟಾದರೆ ಅಧಿಕಾರಿಗಳೇ ಹೊಣೆ. ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ಪರಿಹರಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾ.ಪಂ ಇಓ ಚಂದ್ರಶೇಖರ, ಎಡಿ ಯಂಕಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ, ಸಹಾಯಕ ಕೃಷಿ ನಿರ್ದೇಶಕ ರುದ್ರಗೌಡ ಮಾಲಿ ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಚಾಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗಪ್ಪ ಅಂಗಡಿ, ಪರಿಶಿಷ್ಟ ಪಂಡಗ ವರ್ಗಗಳ ಕಲ್ಯಾಣಾಧಿಕಾರಿ ಭೀಮಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.