ಸಿಎಸ್ಆರ್ ನಿಧಿ ಸವಲತ್ತು ವಿತರಣೆ

| Published : Jun 09 2024, 01:35 AM IST

ಸಿಎಸ್ಆರ್ ನಿಧಿ ಸವಲತ್ತು ವಿತರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದ ಅವರು, ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದು ಗುರ್ಮೆ ಸುರೇಶ್‌ ಶೆಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಕಾಪು

ಭಾರತೀಯ ವಿಕಾಸ್ ಟ್ರಸ್ಟ್ ಸಹಯೋಗದೊಂದಿಗೆ ಪಡುಬಿದ್ರಿಯ ವಿಶೇಷ ಆರ್ಥಿಕ ವಲಯದಲ್ಲಿನ ಆಸ್ಪೆನ್ ಇನ್ಫ್ರಾ ಕಂಪನಿಯ ಮೂಲಕ 2023- 24ನೇ ಸಾಲಿನ ಸಿ.ಎಸ್.ಆರ್ ನಿಧಿಯಿಂದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ಶನಿವಾರ ನಡೆಯಿತು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿ, ಆಸ್ಪೆನ್ ಇನ್ಫ್ರಾ ಕಂಪನಿಯು ಸಂಸ್ಥೆಗೆ ಬಂದ ಲಾಭಾಂಶದ ಪಾಲನ್ನು ಸಮಾಜಕ್ಕೆ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಶಾಸಕನಾಗಿ ಈ ಸಂಸ್ಥೆಯನ್ನು ಅಭಿನಂದಿಸುತ್ತೇನೆ ಎಂದ ಅವರು, ಇಂತಹ ಸಮಾಜಮುಖಿ ಕಾರ್ಯ ಹೆಚ್ಚು ಹೆಚ್ಚು ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪಡುಬಿದ್ರಿ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವೈ. ಶಶಿಧರ್ ಶೆಟ್ಟಿ, ಪಡುಬಿದ್ರಿ ಎಸ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ವೈ. ಸುಧೀರ್ ಕುಮಾರ್, ಮಣಿಪಾಲ ಭಾರತೀಯ ವಿಕಾಸ್ ಟ್ರಸ್ಟ್‌ನ ಜಗದೀಶ್ ಎ. ಪೈ, ಆಸ್ಪೆನ್ ಇನ್ಫ್ರಾ ಕಂಪನಿಯ ಮಹಾ ಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತ ಶಶಿಕಾಂತ್ ಪಡುಬಿದ್ರಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸೌಮ್ಯಲತಾ ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಕಲಾ, ಸದಸ್ಯ ಅಬ್ದುಲ್ ಆಸೀಜ್ ಉಪಸ್ಥಿತರಿದ್ದರು.