ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆಕೆ.ಆರ್.ಪೇಟೆಯಲ್ಲಿ ಫೆಬ್ರವರಿ 10ರಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನ, ಸರ್ಕಾರಿ ಸವಲತ್ತುಗಳ ವಿತರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ನಿವಾರಣಾ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಬೂಕನಕೆರೆ ಹೋಬಳಿಯ 46 ಕೆರೆಗಳನ್ನು ಹೇಮಾವತಿ ನದಿ ನೀರಿನಿಂದ ತುಂಬಿಸುವ ಕಟ್ಟಹಳ್ಳಿ ಏತ ನೀರಾವರಿ ಯೋಜನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.ನಂತರ ಬೆಳಗ್ಗೆ 10 ಗಂಟೆಗೆ ಪಟ್ಟಣದ ಜಯಮ್ಮ ಶಿವಲಿಂಗೇಗೌಡ ಸಮುದಾಯ ಭವನದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಟಾನ, ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ಮತ್ತು ಸಾರ್ವಜನಿಕರ ಕುಂದುಕೊರತೆಗಳ ನಿವಾರಣಾ ಕಾರ್ಯಕ್ರಮ ನಡೆಯಲಿದೆ ಎಂದರು.
ಪೊಲೀಸ್ ಇಲಾಖೆ, ಕಂದಾಯ ಸೇರಿದಂತೆ ಎಲ್ಲ 52 ಇಲಾಖೆಗಳಲ್ಲಿನ ಸಾರ್ವಜನಿಕರ ಸಮಸ್ಯೆ ಆಲಿಸಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಬಹುದು. ಆದ ಕಾರಣ ಸಾರ್ವಜನಿಕರು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಕುಂದು ಕೊರತೆಗಳ ಪರಿಹಾರ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಮಾತನಾಡಿ, ಲೋಕಸಭಾ ಚುನಾವಣೆ ವೇಳೆ ಕಾರಣಕ್ಕಾಗಿ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟು ಜಿಲ್ಲೆಯ ಜನರನ್ನು ಭಾವನಾತ್ಮಕವಾಗಿ ಪ್ರಚೋದಿಸುವ ಕೆಲಸವನ್ನು ಜೆಡಿಎಸ್ ಪಕ್ಷ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿ.ಎಸ್.ಪುಟ್ಟರಾಜು ಈ ಹಿಂದೆ ರಾಜ್ಯದ ಪ್ರಭಾವಿ ಸಚಿವರಾಗಿದ್ದರು. ಜಿಲ್ಲೆಯ ಅಭಿವೃದ್ಧಿಗೆ ಅವರ ಕೊಡುಗೆ ಏನು ಎನ್ನುವುದನ್ನು ಬಹಿರಂಗಪಡಿಸಿ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಜೆಡಿಎಸ್ ಮುಖಂಡರಿಗಿಲ್ಲ ಎಂದರು.ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಪಕ್ಷದ ತಾಲೂಕು ಉಸ್ತುವಾರಿ ಚಿನಕುರಳಿ ರಮೇಶ್, ಮುಖಂಡರಾದ ಬಿ.ಎಲ್.ದೇವರಾಜು, ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರ ಕುಮಾರ್, ಎಂ.ಡಿ.ಕೃಷ್ಣಮೂರ್ತಿ, ಬಸ್ತಿ ರಂಗಪ್ಪ, ರಾಜಯ್ಯ, ಕೆ.ಬಿ.ಪ್ರತಿಮ ಸೇರಿದಂತೆ ಹಲವರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))