ಸಾರಾಂಶ
ಕನ್ನಡಪ್ರಭ ವಾರ್ತೆ ಜಗಳೂರು
ಶಾಸಕರ ಸೂಕ್ತ ನಿರ್ದೇಶನದಂತೆ, ಎಲ್ಲರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಹೇಳಿದರು.ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಪೂರ್ವಾಭಾವಿ ಸಭೆಯಲ್ಲಿ ಮಾತನಾಡಿದ ಅವರು, ಈ ಸಭೆಯಲ್ಲಿ ಗೈರಾಗಿರುವ ತಾಲೂಕುಮಟ್ಟದ ಅಧಿಕಾರಿಗಳಿಗೆ ನೋಟಿಸ್ ಜಾರಿ ಜೊತೆಗೆ ಶಿಸ್ತು ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.
ದಲಿತ ಸಮಾಜದ ಮುಖಂಡ ಶಂಭುಲಿಂಗಪ್ಪ ಮಾತನಾಡಿ, ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಸುಧಾರಣೆ ಮತ್ತು ಡಾ: ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನತ್ಮಕ ವಿಚಾರ ಮತ್ತು ಅವರ ಮೌಲ್ಯಗಳ ಬಗ್ಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಿಳಿಸಿಕೊಡಬೇಕು. ರಾಷ್ಟ್ರೀಯ ಹಬ್ಬದ ಆಚರಣೆಯಲ್ಲಿ ಡಾ: ಅಂಬೇಡ್ಕರ್ ಭಾವಚಿತ್ರವನ್ನು ಕಡ್ಡಾಯವಾಗಿ ಇಡಲೇಬೇಕು ಎಂಬ ಆದೇಶ ಪ್ರತಿ ಸರ್ಕಾರಿ ಶಾಲೆಯವರು ಪಾಲಿಸಬೇಕೆಂದು ಮನವಿ ಮಾಡಿದರು.ವಿಕಲಚೇತನರ ಅಭಿವೃದ್ಧಿ ಸಂಘದ ರಾಜ್ಯಧ್ಯಕ್ಷ ಮಹಾಂತೇಶ್ ಬ್ರಹ್ಮ ಮಾತನಾಡಿ, ತಾಲೂಕಿನಲ್ಲಿ ವಿಶೇಷಚೇತನರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಇಂಥ ವಿಶೇಷಚೇತನರಿಗೆ ಸನ್ಮಾನ ಮಾಡಬೇಕು ಎಂದರು.
ನಿವೃತ್ತ ಸಮಾಜ ಕಲ್ಯಾಣ ಅಧಿಕಾರಿ ಬಿ.ಮಹೇಶ್ವರಪ್ಪ ಮಾತನಾಡಿ ಶಾಸಕರಾದ ಬಿ.ದೇವೇಂದ್ರನವರ ಅಪೇಕ್ಷೆಯಂತೆ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು. ಎಲ್ಲ ಅಧಿಕಾರಿಗಳು ಸಹಕರಿಸುವಂತೆ ತಿಳಿಸಿದರು.ತಾಲೂಕು ಕಾರ್ಯನಿರ್ವಾಹಕಾಧಿಕಾರಿ ಕರಿಬಸಪ್ಪ, ಹಿರಿಯ ನಾಗರೀಕರ ಸಂಘದ ಗೌರವಧಕ್ಷರಾದ ತಿಪ್ಪೇಸ್ವಾಮಿ, ಗ್ಯಾಸ್ ಓಬಣ್ಣ, ಸತ್ಯಮೂರ್ತಿ, ತಾಲೂಕುಮಟ್ಟದ ಅಧಿಕಾರಿಗಳು, ಸಂಚಾಲಕ ಕುಬೇಂದ್ರಪ್ಪ, ವಿವಿಧ ಸಂಘಗಳ ಮುಖ್ಯಸ್ಥರು ಭಾಗವಹಿಸಿದ್ದರು.
- - - -27ಜೆಎಲ್ಆರ್2:ಜಗಳೂರು ತಾಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನ ಅಂಗವಾಗಿ ನಡೆದ ಪೂರ್ವಾಭಾವಿ ಸಭೆಯಲ್ಲಿ ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಮಾತನಾಡಿದರು.