ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಬುಕಿಂಗ್ ಮಾಡಿದಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಅವಧಿಯೊಳಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಕ್ರಮವಹಿಸಲು ಸೂಚಿಸಿದರಲ್ಲದೆ ದುರ್ಬಳಕೆ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಂಪನಿ, ವಿತರಕರು, ಬುಕ್ಕಿಂಗ್, ದಾಸ್ತಾನು ಲಭ್ಯ, ಎಷ್ಟು ಗ್ಯಾಪ್ ಇದೆ ಎಂಬುದರ ಮಾಹಿತಿಯನ್ನು ಪ್ರತಿದಿನದ ಮಾಹಿತಿ ಒದಗಿಸುವಂತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಗೃಹ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಣೆ ಮಾಡುವ ಏಜೆನ್ಸಿಗಳು ಸ್ಥಳೀಯವಾಗಿ ಯಾವುದೇ ಸಮಸ್ಯೆಗಳು ಉದ್ಭವಿಸದಂತೆ ಎಚ್ಚರಿಕೆವಹಿಸಿ ಗ್ರಾಹಕರೊಂದಿಗೆ ಸ್ಪಂದಿಸಿ ಶಾಂತಿಯುತವಾಗಿ ನಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾತನಾಡಿದ ವಾಣಿಜ್ಯ / ಗೃಹಬಳಕೆ ಎಲ್ ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ನಿಯಂತ್ರಣ ಮತ್ತು ಮೇಲ್ವಿಚಾರಣೆ ಕುರಿತು ಸಭೆ ನಡೆಸಿ ಮಾತನಾಡಿದ ಅವರು ವಿತರಕರು ಸರ್ಕಾರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆಮಾಡುಂತೆ ಸೂಚಿಸಿದರು. ಗೃಹ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್‌ಗೆ ಬುಕಿಂಗ್ ಮಾಡಿದಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಅವಧಿಯೊಳಗೆ ಗ್ಯಾಸ್ ಸಿಲಿಂಡರ್ ಒದಗಿಸಲು ಕ್ರಮವಹಿಸಲು ಸೂಚಿಸಿದರಲ್ಲದೆ ದುರ್ಬಳಕೆ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕಂಪನಿ, ವಿತರಕರು, ಬುಕ್ಕಿಂಗ್, ದಾಸ್ತಾನು ಲಭ್ಯ, ಎಷ್ಟು ಗ್ಯಾಪ್ ಇದೆ ಎಂಬುದರ ಮಾಹಿತಿಯನ್ನು ಪ್ರತಿದಿನದ ಮಾಹಿತಿ ಒದಗಿಸುವಂತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.ಹೆಚ್ಚುವರಿ ಪೊಲೀಸ್ ಶ್ರೀನಿಧಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೃಷ್ಣಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಅರುಣ್ ಕುಮಾರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನಿಲ್, ಗ್ಯಾಸ್ ಏಜೆನ್ಸಿ ಮಾಲೀಕರು ಹಾಗೂ ಹೋಟೆಲ್ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.