ವಸತಿ ನಿಲಯಗಳಲ್ಲಿ ಅವ್ಯವಸ್ಥೆ ಕಂಡು ಬಂದರೇ ಶಿಸ್ತುಕ್ರಮ

| Published : Feb 26 2024, 01:30 AM IST

ಸಾರಾಂಶ

ಇಂಡಿ ಹಾಗೂ ಚಡಚಣ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಸತಿ ನಿಲಯಗಳ ಅವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡ ಸರಣಿ ವರದಿಗಳನ್ನು ಗಮನಿಸಿದ್ದೇನೆ. ಈಗಾಗಲೆ ಜಿಲ್ಲಾಮಟ್ಟದಲ್ಲಿ ತನಿಖಾ ತಂಡ ರಚಿಸಲಾಗಿದೆ. ತಾಲೂಕಿನಲ್ಲಿಯೂ ಒಂದು ತಂಡ ರಚನೆ ಮಾಡುತ್ತೇನೆ. ನಾನೇ ಖುದ್ದಾಗಿ ಕೆಲ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಎಸಿ ಅಬೀದ್‌ ಗದ್ಯಾಳ ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ಓದಿ ಶಿಕ್ಷಣ ಪಡೆಯಬೇಕು ಎಂಬ ಸದುದ್ದೇಶದಿಂದ ವಸತಿ ನಿಲಯಗಳಿಗೆ ಪ್ರವೇಶ ಪಡೆದಿರುತ್ತಾರೆ. ಸರ್ಕಾರ ವಸತಿ ನಿಲಯಗಳಿಗೆ ಮೂಲ ಸೌಕರ್ಯ ಹಾಗೂ ಗುಣಮಟ್ಟದ ಆಹಾರ ಒದಗಿಸಲು ಸಾಕಷ್ಟು ಅನುದಾನ ಖರ್ಚು ಮಾಡುತ್ತಿದೆ. ಸರ್ಕಾರ ಬಡ ವಿದ್ಯಾರ್ಥಿಗಳಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಒದಗಿಸುವುದು ಅಧಿಕಾರಿಗಳ ಕರ್ತವ್ಯ. ಆದರೂ ವಸತಿ ನಿಲಯಗಳಲ್ಲಿ ಗುಣಮಟ್ಟದ ಆಹಾರ ಹಾಗೂ ಮೂಲಭೂತ ಸೌಲಭ್ಯದ ಕೊರತೆ ಬಗ್ಗೆ ತಿಳಿದುಕೊಂಡಿದ್ದೇನೆ ಎಂದು ತಿಳಿಸಿದರು.

ಈ ಕುರಿತು ಇಂಡಿ ಹಾಗೂ ಚಡಚಣ ತಾಲೂಕಿನ ಕೆಲ ವಸತಿ ನಿಲಯಗಳಿಗೆ ನಾನೇ ಖುದ್ದಾಗಿ ಭೇಟಿ ಮಾಡಿ ಪರಿಶೀಲಿಸುತ್ತೇನೆ. ಒಂದು ವೇಳೆ ಹೀಗೇನಾದರೂ ಸಮಸ್ಯೆ ಕಂಡು ಬಂದರೆ ಮೂಲಾಜಿಲ್ಲದೆ ಸಂಬಂಧಿಸಿದ ಅಧಿಕಾರಿ ಹಾಗೂ ವಸತಿ ನಿಲಯದ ನಿಲಯ ಪಾಲಕರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಸತಿ ನಿಲಯಗಳ ಅವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟಗೊಂಡ ಸರಣಿ ವರದಿಗಳನ್ನು ಗಮನಿಸಿದ್ದೇನೆ. ಇಂಡಿ ಹಾಗೂ ಚಡಚಣ ತಾಲೂಕಿನ ಕೆಲ ವಸತಿ ನಿಲಯಗಳಿಗೆ ನಾನೇ ಖುದ್ದಾಗಿ ಭೇಟಿ ಮಾಡಿ ಪರಿಶೀಲಿಸುತ್ತೇನೆ. ಒಂದು ವೇಳೆ ಹೀಗೇನಾದರೂ ಸಮಸ್ಯೆ ಕಂಡು ಬಂದರೆ ಮೂಲಾಜಿಲ್ಲದೆ ಸಂಬಂಧಿಸಿದ ಅಧಿಕಾರಿ ಹಾಗೂ ವಸತಿ ನಿಲಯದ ನಿಲಯ ಪಾಲಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.

-ಅಬೀದ್‌ ಗದ್ಯಾಳ, ಎಸಿ.