ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ವ್ಯಾಸಂಗದ ಜೊತೆಗೆ ಶಿಸ್ತು ಮುಖ್ಯ: ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿ

| Published : Feb 08 2024, 01:33 AM IST

ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ವ್ಯಾಸಂಗದ ಜೊತೆಗೆ ಶಿಸ್ತು ಮುಖ್ಯ: ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿ ದಿಸೆಯಿಂದಲೇ ಶಿಸ್ತು ಕಲಿತು ಉತ್ತಮ ಅಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಲಿದೆ. ವಿದ್ಯಾರ್ಥಿ ಜೀವನ ಮುಗಿದ ನಂತರ ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬುದರ ಬಗ್ಗೆ ಚಿಂತನೆ ನಡೆಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಗಳ ತಂದೆ ತಾಯಿಯರು ತಮ್ಮ ಮಕ್ಕಳು ಇದೇ ರೀತಿ ಸಾಧನೆ ಮಾಡಬೇಕು. ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಆಶಿಸುತ್ತಾರೆ. ಅದರಂತೆ ಮುಂದಿನ ಜೀವನ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ.

ಕನ್ನಡಪ್ರಭ ವಾರ್ತೆ ಹಲಗೂರು

ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ವ್ಯಾಸಂಗದ ಜೊತೆಗೆ ಶಿಸ್ತು ಕಲಿಯಬೇಕು ಎಂದು ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿ ತಿಳಿಸಿದರು.

ಜೆಪಿಎಂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ವಾಮಿ ವಿದ್ಯಾಸಂಸ್ಥೆ, ಜೆ.ಪಿ.ಸ್ಮಾರಕ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಮಾರೋಪ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ವಿದ್ಯಾರ್ಥಿ ದಿಸೆಯಿಂದಲೇ ಶಿಸ್ತು ಕಲಿತು ಉತ್ತಮ ಅಭ್ಯಾಸ ಮಾಡಿದರೆ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯವಾಗಲಿದೆ. ವಿದ್ಯಾರ್ಥಿ ಜೀವನ ಮುಗಿದ ನಂತರ ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬುದರ ಬಗ್ಗೆ ಚಿಂತನೆ ನಡೆಸಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಗಳ ತಂದೆ ತಾಯಿಯರು ತಮ್ಮ ಮಕ್ಕಳು ಇದೇ ರೀತಿ ಸಾಧನೆ ಮಾಡಬೇಕು. ಸಮಾಜದಲ್ಲಿ ಒಳ್ಳೆಯ ಪ್ರಜೆಗಳಾಗಬೇಕು ಎಂದು ಆಶಿಸುತ್ತಾರೆ. ಅದರಂತೆ ಮುಂದಿನ ಜೀವನ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ ಎಂದು ಸಲಹೆ ನೀಡಿದರು.

ಯೋಗ ಶಿಕ್ಷಕ ಕೆ.ಎಂ.ಶಿವಕುಮಾರ್ ಮಾತನಾಡಿ, ಪ್ರಸ್ತುತ ಪ್ರತಿಯೊಬ್ಬರು ಕಾಲಕ್ಕೆ ತಕ್ಕಂತೆ ಜ್ಞಾನವನ್ನು ಹೆಚ್ಚಿಸಿಕೊಳ್ಳದಿದ್ದರೆ ನಮ್ಮ ಸುತ್ತಲಿನ ಸಮಾಜವು ನಮ್ಮಿಂದ ಅಂತರ ಕಾಯ್ದುಕೊಳ್ಳಲಿದೆ. ವಿದ್ಯಾರ್ಥಿಗಳು ಪ್ರತಿದಿನವೂ ಕಲಿಕೆಯಲ್ಲಿ ನಿರಂತರವಾಗಿರಬೇಕು ಎಂದರು.

ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ವಾಮಿ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಮೀನಾಕ್ಷಿ, ಖಜಾಂಚಿ ಕೇಶವ, ನಿವೃತ್ತ ಪ್ರಾಂಶುಪಾಲರಾದ ವಿ.ಸ್ವಾಮಿ, ಕೆ.ಪುಟ್ಟಸ್ವಾಮಿ, ಉಪನ್ಯಾಸಕರಾದ ಸೋಹೇಲ್, ಚಂದ್ರು, ಜಯಂತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಧಾರವಾಡದ ಪ್ರೀತಿಯ ಅಜ್ಜ ದ.ರಾ.ಬೇಂದ್ರೆ: ತ್ರಿವೇಣಿ

ಕಿಕ್ಕೇರಿ:ಕನ್ನಡ ಕಾವ್ಯ ಲೋಕಕ್ಕೆ ಹೊಸದಾಗಿ ಶೋಭೆ ತಂದ ಧಾರವಾಡದ ಪ್ರೀತಿಯ ಅಜ್ಜ ದ.ರಾ.ಬೇಂದ್ರೆ ಎಂದು ಸ್ಪಂದನಾ ಪೌಂಢೇಷನ್ ಟ್ರಸ್ಟಿ ತ್ರಿವೇಣಿ ತಿಳಿಸಿದರು.ಪಟ್ಟಣದಲ್ಲಿ ಸ್ಪಂದನಾ ಫೌಂಡೇಷನ್, ಕರವೇ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ದ.ರಾ.ಬೇಂದ್ರೆ ಜನ್ಮ ದಿನಾಚರಣೆಯಲ್ಲಿ ಮಾತನಾಡಿ, ಎಳೆಯ ಮನಸ್ಸಿನಲ್ಲಿ ಕನ್ನಡ, ಕಾವ್ಯ, ಕವಿತೆ ರಚನೆಗೆ ಸ್ಪೂರ್ತಿ ತುಂಬಲು ಮಕ್ಕಳಿಗೆ ಮೊದಲು ಕವಿಗಳ ಪರಿಚಯವಾಗಬೇಕು. ಇದರಿಂದ ಕಾವ್ಯ ಲೋಕಕ್ಕೆ ಆಸಕ್ತಿ ತೋರುತ್ತಾರೆ ಎಂದರು.ಕವಿಗಳು ತಾವು ಅನುಭವಿಸಿದ ಕಷ್ಟಗಳನ್ನು ಕಾವ್ಯದಲ್ಲಿ ಎಳೆಯಾಗಿ ನೇಯ್ದಿದ್ದಾರೆ. ನಾಕು ತಂತಿ ಕವನ ಸಂಕಲನದಿಂದ ಜ್ಞಾನಪೀಠ ಪ್ರಶಸ್ತಿ ಪಡೆದು ಕನ್ನಡ ಸಾರಸ್ವತ ಲೋಕಕ್ಕೆ ಕಿರೀಟ ಮುಡಿಸಿದ್ದಾರೆ. ಕಾವ್ಯ ಶಬ್ಧ ಗಾರುಡಿಗರಾಗಿ ರಸವೆ ಜನನ, ವಿರಸವೆ ಮರಣ, ಸಮರಸವೇ ಜೀವನ ಎಂದು ದ.ರಾ.ಬೇಂದ್ರೆ ಬದುಕಿದರು ಎಂದು ಸ್ಮರಿಸಿದರು.ಈ ವೇಳೆ ಕವಿತಾ, ಶಾರದಾ ಉಪಸ್ಥಿತರಿದ್ದರು.