ವಿದ್ಯಾರ್ಥಿ ಸಮೂಹ ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಕುರಿತು ಕಲ್ಪನೆಯನ್ನು ಹೊಂದಬೇಕು. ಓದುವ ಸಮಯದಲ್ಲಿ ಕಾಲಹರಣ ಮಾಡಿದರೆ ಕಷ್ಟ, ನೋವು ಕಟ್ಟಿಟ್ಟ ಬುತ್ತಿ. ನೈತಿಕ ಮಾರ್ಗದಲ್ಲಿ ನಡೆದು ಸಾಧನೆ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.

ಗಜೇಂದ್ರಗಡ: ವಿದ್ಯಾರ್ಥಿಗಳಲ್ಲಿ ಗುರಿ ತಲುಪಲು ಶಿಸ್ತು ಮತ್ತು ನಿರಂತರ ಅಧ್ಯಯನವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸವಾಲುಗಳು ಸರಳವಾಗುತ್ತವೆ ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗ ಬಂಡು ಮಸನಾಯಕ ತಿಳಿಸಿದರು.

ಇಲ್ಲಿನ ಪುರ್ತಗೇರಿ ಕ್ರಾಸ್ ಬಳಿ ಇರುವ ಅನ್ನದಾನೇಶ್ವರ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಾಯೋಗಿಕ ಪರೀಕ್ಷಾ ಕೇಂದ್ರದ ಉದ್ಘಾಟನೆ, ವಿವಿಧ ಸಾಂಘಿಕ ಚಟುವಟಿಕೆಗಳ ಸಮಾರೋಪ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.ವಿದ್ಯಾರ್ಥಿ ಸಮೂಹ ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಕುರಿತು ಕಲ್ಪನೆಯನ್ನು ಹೊಂದಬೇಕು. ಓದುವ ಸಮಯದಲ್ಲಿ ಕಾಲಹರಣ ಮಾಡಿದರೆ ಕಷ್ಟ, ನೋವು ಕಟ್ಟಿಟ್ಟ ಬುತ್ತಿ. ನೈತಿಕ ಮಾರ್ಗದಲ್ಲಿ ನಡೆದು ಸಾಧನೆ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ಶಿವಾನಂದ ಕಲ್ಲೂರ ಮಾತನಾಡಿ, ವಿಜ್ಞಾನ ಕಠಿಣವಾಗಿದ್ದು, ಅರ್ಥ ಮಾಡಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಹಲವರಲ್ಲಿದೆ. ಆದರೆ ವಿಜ್ಞಾನವನ್ನು ಎಲ್ಲರೂ ಓದಬಹುದಾಗಿದ್ದು, ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು. ನನ್ನಿಂದ ಕಷ್ಟ ಎನ್ನುವ ಭಾವನೆಯಿಂದ ಹೊರಬಂದು ಇಷ್ಟಪಟ್ಟಾಗ ಮನನ ಸಾಧ್ಯ ಎಂದರು.

ಕಾಲೇಜಿನ ಚೇರ್ಮನ್ ವೀರಯ್ಯ ವಿ. ವಸ್ತ್ರದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ನೂತನ ಪ್ರಾಯೋಗಿಕ ಕೇಂದ್ರದ ಉದ್ಘಾಟನೆ ನೆರವೇರಿತು. ಬಿ.ಎಸ್. ಗೌಡರ, ಶಿವಾನಂದ ಮಠದ, ಎಂ.ಜಿ. ಸೋಮನಕಟ್ಟಿ, ಎಂ.ಪಿ. ಪಾಟೀಲ, ಪಿ.ಎನ್. ಚವಡಿ, ವೀರಣ್ಣ ಶೆಟ್ಟರ, ರೈತ ದೇವೇಂದ್ರಪ್ಪ ಬಳೂಟಗಿ, ಪುರಸಭೆ ಮಾಜಿ ಸದಸ್ಯ ರಾಜು ಸಾಂಗ್ಲಿಕರ, ವಕೀಲ ರಫೀಕ ತೋರಗಲ್ಲ, ಕಾನಿಪ ತಾಲೂಕಾಧ್ಯಕ್ಷ ಮಂಜುನಾಥ ಎಸ್. ರಾಠೋಡ, ಜಿಲ್ಲಾ ಕಾನಿಪ ಕಾರ್ಯಕಾರಿಣಿ ಸದಸ್ಯ ಶಿವಕುಮಾರ ಶಶಿಮಠ, ಶಿಕ್ಷಕ ಎ.ಕೆ. ಒಂಟಿ, ಪ್ರಾಚಾರ್ಯರಾದ ವಸಂತರಾವ್ ಗಾರಗಿ, ಬಸಯ್ಯ ಹಿರೇಮಠ, ಎ.ಪಿ. ಗಾಣಗೇರ, ಶಿಕ್ಷಕ ಮಂಜುನಾಥ ಕಾಡದ ಸೇರಿ ಇತರರು ಇದ್ದರು.